ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಿ ಇಲ್ಲಿ ಎರಡು ರೀತಿಯ ಹುದ್ದೆಗಳು ಇವೆ. ಮೊದಲನೆಯದು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು. ಇದರಲ್ಲಿ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಗಳು, ಹಾಗೆಯೇ ಸಿವಿಲ್ ಇಂಜಿನಿಯರ್ ಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎರಡನೆಯದು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳು. ಇದರಲ್ಲೂ ಸಹ ಮೇಲಿನ ಪದವಿಯವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: ಒಟ್ಟಾರೆಯಾಗಿ 200 ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದೆ. ಭಾರತದಲ್ಲಿ ಕರ್ನಾಟಕ ಸೇರಿ ಎಲ್ಲಾ ಕಡೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ವಿದ್ಯಾರ್ಹತೆ: ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮತ್ತೆ ಯಾವುದೇ ಪದವಿ ಪದವಿಯವರು ಅರ್ಜಿ ಸಲ್ಲಿಸುವಂತಿಲ್ಲ.
ವಯೋಮಿತಿ: ಅಪ್ರೆಂಟಿಸ್ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಮಾಡಲಾಗುತ್ತದೆ. ಆದ್ದರಿಂದ ಇದಕ್ಕೆ ಯಾವುದೇ ಗರಿಷ್ಠ ಮತ್ತು ಕನಿಷ್ಠ ಪರಿಮಿತಿಯನ್ನು ನೋಡಲಾಗುವುದಿಲ್ಲ.
ಆಯ್ಕೆ ವಿಧಾನ: ಇಲಾಖೆಯು ಕರೆದಿರುವ ಎಲ್ಲಾ ಹುದ್ದೆಗಳಿಗೆ ಅತಿ ಹೆಚ್ಚಿನ ಅಂಕ ಗಳಿಸಿದವರಿಗೆ ಮೊದಲ ಆದ್ಯತೆ ಇರುತ್ತದೆ. ಆದ್ದರಿಂದ ಫಲಿತಾಂಶದ ಮೇಲೆ ಹುದ್ದೆಗಳು ಅವಲಂಬಿತವಾಗಿರುತ್ತವೆ.
ಸಂಬಳ: ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ 7000 ಸಂಬಳವನ್ನು ನೀಡಲಾಗುತ್ತದೆ. ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗೆ 5000 ಸಂಬಳವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅರ್ಜಿಸಲ್ಲಿಸಲು 4 ಜನವರಿ 2021 ಮೊದಲನೆಯ ದಿನವಾಗಿದೆ. ಈ ದಿನಾಂಕದಿಂದ ಅರ್ಜಿಯನ್ನು ತುಂಬಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19 ಜನವರಿ 2021 ಇದು ಕೊನೆಯ ದಿನಾಂಕವಾಗಿದೆ. ಈಗಿನ ದಿನಾಂಕದವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗೆಯೇ 27 ಜನವರಿ 2021ರಂದು ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.