ಕುರಿ ಹಾಗು ಧನದ ಕೊಟ್ಟಿಗೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ಧನ ಸಹಾಯ ಪಡೆದುಕೊಳ್ಳುವುದು ಹೇಗೆ..!

Hit

ರೈತರು ತೋಟ ಹಾಗೂ ಗದ್ದೆಯ ಜೊತೆಗೆ ಹೈನುಗಾರಿಕೆಯನ್ನು ಮಾಡುತ್ತಾರೆ. ಹೈನುಗಾರಿಕೆಯಲ್ಲಿ ಆಕಳು ಸಾಕಣೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮುಂತಾದವುಗಳು ಬರುತ್ತವೆ. ಇವುಗಳಲ್ಲಿ ಒಂದಾದ ಕುರಿ ಸಾಕಾಣಿಕೆ ಮಾಡುವವರಿಗೆ ಅಥವಾ ಕುರಿ ಸಾಕಾಣಿಕೆ ಮಾಡಬೇಕು ಎಂದು ಅಂದುಕೊಳ್ಳುತ್ತಿರುವವರಿಗೆ ಜಿಲ್ಲಾ ಪಂಚಾಯತದಿಂದ ಒಂದು ಸೌಲಭ್ಯ ಒದಗಿಸುತ್ತಿದೆ.

ಗ್ರಾಮಾಂತರ ಪ್ರದೇಶದ ಜನರಿಗೆ ನರೇಗಾ ಯೋಜನೆ ಅಡಿಯಲ್ಲಿ, ಆರ್ಥಿಕ ಚಟುವಟಿಕೆಗೆ ನೆರವು ನೀಡುವ ಸಲುವಾಗಿ ಜಿಲ್ಲಾ ಪಂಚಾಯತವು ಸೌಲಭ್ಯ ಜಾರಿಗೆ ತಂದಿದೆ. ಈ ಸೌಲಭ್ಯವು ಕುರಿ ಹಾಗೂ ಮೇಕೆ ಸಾಕಾಣಿಕೆ ಮಾಡುವವರಲ್ಲಿ ಅರ್ಹರಾಗಿರುವವರಿಗೆ ಮಾತ್ರ ನೀಡಲಾಗುತ್ತದೆ. ಮೇಕೆ ಸಾಕಾಣಿಕೆ ಮಾಡಲು ಶೆಡ್ ಮಾಡಲು ಬೇಕಾದ ಅಂದಾಜು ವೆಚ್ಚವನ್ನು ಪಟ್ಟಿ ಮಾಡಿ ನಿಗದಿತ ಹಣಕ್ಕೆ ಗ್ರಾಮ ಪಂಚಾಯತದಲ್ಲಿ ಅನುಮೋದನೆ ತೆಗೆದುಕೊಳ್ಳಬಹುದು.

ಈ ಸೂಚನೆಯನ್ನು ನೀಡಲು ಜಿಲ್ಲಾಧಿಕಾರಿಯಿಂದ ಗ್ರಾಮ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚನೆ ದೊರಕಿದೆ. ತಮ್ಮ ಜಾಗದ ಸುತ್ತಲೂ ಶೆಡ್ ನಿರ್ಮಿಸಲು 44,000 ಸಾವಿರದ ವರೆಗೆ ಸಹಾಯ ಧನ ಗ್ರಾಮ ಪಂಚಾಯತಿಯಿಂದ ದೊರಕುತ್ತದೆ. ಗ್ರಾಮ ಪಂಚಾಯತಿ ವತಿಯಿಂದ ಕುರಿ ಹಾಗೂ ಮೇಕೆ ಸಾಕಾಣಿಕೆಗೆ ಧನ ಸಹಾಯ ಸಿಗುತ್ತದೆ. ಅದರ ಲಾಭ ಪಡೆದುಕೊಳ್ಳಲು ಗ್ರಾಮ ಪಂಚಾಯತದ ಅಧಿಕಾರಿಗಳನ್ನು ಆದಷ್ಟು ಬೇಗ ಭೇಟಿ ಮಾಡುವುದು ಉತ್ತಮ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *