ಮೊಳಕೆ ಕಾಳು ತಿನ್ನುವುದರಿಂದ ದೇಹದಲ್ಲಿ ನಿಜವಾಗಲೂ ಏನು ಆಗುತ್ತೆ ಗೊತ್ತಾ..!

Hit

ಹೌದು ಮೊಳಕೆಕಾಳಿನಲ್ಲಿ ಹಲುವು ರೋಗನಿರೋಧಕ ಶಕ್ತಿಗಳಿವೆ, ಮೊಳಕೆಕಾಳಿನಲ್ಲಿ ಹಲುವು ಆರೋಗ್ಯಕ ಅಂಶಗಳು ಇವೆ. ಅದರಲ್ಲೂ ಮನುಷ್ಯನ ದೇಹಕ್ಕೆ ಮೊಳಕೆಕಾಳು ಇನ್ನು ಉತ್ತಮ ಹೇಗೆ ಅಂತೀರಾ ಇಲ್ಲಿದೆ ನೋಡಿ. ಜೀರ್ಣಕ್ರಿಯೆಗೆ ಹೆಚ್ಚು ಸಹಾಯಕವಾಗಿದೆ. ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

ರಕ್ತ ಪರಿಚಲನೆಗೆ ಉತ್ತಮವಾದ ಆಹಾರವಾಗಿದೆ. ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

ತೂಕ ಇಳಿಸುವರಿಗೆ ಇದು ಇನ್ನು ಉತ್ತಮ. ತೂಕ ಇಳಿಸಲು ಡಯಟ್ ಮಾಡುವವರಮ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ. ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿಯಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *