ಕ್ಯಾನ್ಸರ್, ಮೂಲವ್ಯಾಧಿ, ಮಲಬದ್ಧತೆ ಹೀಗೆ ಇನ್ನು ಈ ಹತ್ತು ರೋಗಗಳಿಗೆ ರಾಮಬಾಣ ಬೆಳ್ಳುಳ್ಳಿ

ಆರೋಗ್ಯ

ಬೆಳ್ಳೆಗ್ಗೆ ಖಾಲಿ ಹೊಟ್ಟೆಯಲ್ಲಿ ಹುರಿದ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಆಗುವ ಉಪಯೋಗಗಳು ಯಾವುವು ಎಂದರೆ ಮೂಲವ್ಯಾಧಿ, ಮಲಬದ್ಧತೆ, ಕಿವಿ ನೋವು, ರಕ್ತದೊತ್ತಡ ಇತ್ಯಾದಿ ಅನೇಕ ಕಾಯಿಲೆಗಳಿಗೆ ಇದು ರಾಮಬಾಣ.

ಹಸಿವನ್ನು ಹೆಚ್ಚಿಸುವ ಕೆಲಸವನ್ನೂ ಇದು ಮಾಡುತ್ತದೆ. ಬೆಳ್ಳೆಗ್ಗೆ ಬೆಳ್ಳುಳ್ಳಿ ಸೇವಿಸಿದ ಒಂದು ಗಂಟೆಯಲ್ಲಿ ಜೀರ್ಣವಾಗಿ ಅದು ನಿಮ್ಮ ಆರೋಗ್ಯ ವೃದ್ಧಿ ಕೆಲಸ ಮಾಡಲು ಶುರುವಾಗುತ್ತದೆ. ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶರೀರದಲ್ಲಿರುವ ವಿಷ ಪದಾರ್ಥವನ್ನು ಮಲ ಹಾಗೂ ಮೂತ್ರದ ಮೂಲಕ ಹೊರ ಹಾಕುತ್ತದೆ. ದೇಹದ ಆಲಸ್ಯ ಕಡಿಮೆ ಮಾಡಿ ಶರೀರಕ್ಕೊಂದು ವಿಶೇಷ ಶಕ್ತಿ ಕೊಡುತ್ತದೆ. ಹುರಿದ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ಕೋಶಗಳು ಶಕ್ತಿ ಕಳೆದುಕೊಳ್ಳುತ್ತವೆ.

ಪ್ರತಿದಿನ ಹುರಿದ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಚಯಾಪಚಯ ಕ್ರಿಯೆ ನಿಮ್ಮ ದೇಹದಲ್ಲಿ ಬಹಳ ಸುಲಭವಾಗಿ ಬೊಜ್ಜು ಕರಗಿಸುವಲ್ಲಿ ಸಹಾಯ ಮಾಡುತ್ತದೆ. ಇದರ ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಶ್ವಾಸನಾಳಕ್ಕೆ ಬಹಳ ಪ್ರಯೋಜನಕಾರಿಯಾಗಿದೆ.

ಅಸ್ತಮಾ, ಕೆಮ್ಮು, ಕಫ ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಇತ್ತೀಚೆಗೆ ನಡೆದ ಸಂಶೋಧನೆಯ ಪ್ರಕಾರ ಪ್ರತಿದಿನ 5-6 ಬೆಳ್ಳುಳ್ಳಿ ಮೊಗ್ಗನ್ನು ತಿನ್ನುವ ವ್ಯಕ್ತಿಗೆ ಕೆಲವೇ ಗಂಟೆಗಳಲ್ಲಿ ಅದರ ಪರಿಣಾಮ ಕಾಣುತ್ತದೆ. ಕೇವಲ ಬೆಳ್ಳುಳ್ಳಿ ಸೇವನೆಯಿಂದ ಅಷ್ಟೇ ಅಲ್ಲ, ಬೆಳ್ಳುಳ್ಳಿಯನ್ನು ಅರೆದು ಚೇಳು ಕುಟುಕಿದ ಜಾಗಕ್ಕೆ ನೀವು ಹಚ್ಚಿದರೆ ಶೀಘ್ರವಾಗಿ ಗುಣವಾಗುತ್ತದೆ.

ಇನ್ನು ಮೂಲವ್ಯಾಧಿ ಇರುವವರು ಗಣಿಕೆ ಸೊಪ್ಪುನ್ನು ಆಹಾರ ರೂಪದಲ್ಲಿ ತಿನ್ನುವುದರಿಂದ ಬಹಳ ಬೇಗ ನಿಯಂತ್ರಣ ಮಾಡಬಹುದು. ಕಾಶೀ ಸೊಪ್ಪನ್ನು ಆಹಾರ ರೂಪದಲ್ಲಿ ಸೇವನೆ ಮಾಡುವುದರಿಂದ ನಿಮ್ಮ ದೇಹದ ರಕ್ತವು ಶುದ್ಧಿಯಾಗುತ್ತದೆ. ಇದು ಮಾತ್ರವಲ್ಲದೆ, ಕಾಶೀ ಸೊಪ್ಪಿನ ರಸಕ್ಕೆ ಜೇನುತುಪ್ಪ ಮಿಶ್ರಣ ಮಾಡಿ ಕುಡಿದರೆ ನಿಮ್ಮ ದೇಹದಲ್ಲಿ ಉರಿಮೂತ್ರ ಸಮಸ್ಯೆಯು ಸಹ ನಿಲ್ಲುತ್ತದೆ.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *