ನಿಮ್ಮ ಮನೆ ಮುಂದೆ ಹಲವು ಸಸ್ಯಗಳನ್ನು ಬೆಳೆಸಿರುತ್ತೀರಿ, ಆದರೆ ಬಿಳಿ ಎಕ್ಕೆ ಗಿಡ ಇಲ್ಲ ಅಂದ್ರೆ ಈ ಲೇಖನ ನೋಡಿದ ಮೇಲಾದ್ರು ಮನೆ ಮುಂದೆ ಬಿಳಿ ಎಕ್ಕೆ ಗಿಡ ಬೆಳೆಸುತ್ತೀರ ಅನ್ಸತ್ತೆ, ಅಷ್ಟೊಂದು ಲಾಭದಾಯಕ ಗುಣಗಳನ್ನು ಹೊಂದಿದೆ. ಬಿಳಿ ಎಕ್ಕೆ ಗಿಡ ನಿಮ್ಮ ಮನೆ ಮುಂದಿದ್ರೆ ಯಾವೆಲ್ಲ ಲಾಭವನ್ನು ಪಡೆಯಬಹುದು ಅನ್ನೋದು ಮುಂದೆ ಇದೆ ನೋಡಿ.
ಎಕ್ಕೆಯ ಔಷಧೀಯ ಗುಣಗಳು: ಎಕ್ಕದ ಯಾವುದೇ ಭಾಗವನ್ನಾಗಲಿ ಔಷಧರೂಪದಲ್ಲಿ ಸೇವನೆಗೆ ನೀಡಬೇಕಾದಲ್ಲಿ, ಆ ಭಾಗವನ್ನು ನೆರಳಿನಲ್ಲಿ ಒಣಗಿಸಿ ಪುಡಿಮಾಡಿಕೊಂಡು ೭ ಸಾರಿ ಹಸುವಿನ-ಹಾಲಿನಲ್ಲಿ ಭಾವನೆ ಕೊಟ್ಟು ಅನಂತರ ೭ ಬಾರಿ ಎಣ್ಣೆ-ಹಾಲಿನಲ್ಲಿ ಭಾವನೆಕೊಟ್ಟು ಉಪಯೋಗಿಸಬೇಕು.
ಯಾವುದೇ ಬಗೆಯ ಜ್ವರವಿದ್ದರೆ, ಎಕ್ಕದ ಬೇರನ್ನು ನಿಂಬೇಹಣ್ಣಿನ-ರಸದಲ್ಲಿ ಅರೆದು ಸೇವಿಸಿದರೆ ಉಪಶಮವಾಗುತ್ತದೆ. ಚೇಳುಕಡಿದಲ್ಲಿ ಎಕ್ಕದ ಬೇರನ್ನು ತಣ್ಣೀರಿನಲ್ಲಿ ಅರೆದು ಕುಡಿಯಬೇಕು. ಕಫದಿಂದ ಕೂಡಿದ ಕೆಮ್ಮಿದ್ದರೆ,ಎಕ್ಕದ ಬೇರಿನ ತೊಗಟೆಯನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿಟ್ಟುಕೊಂಡು ೫ ಚಿಟಿಕೆಯಷ್ಟನ್ನು ಜೇನುತುಪ್ಪದೊಂದಿಗೆ ಸೇರಿಸಿ ದಿನಕ್ಕೆ ಎರಡುಬಾರಿ ಸೇವಿಸಬೇಕು. ಮುಖದ ಮೇಲೆ ಕಪ್ಪು ಚುಕ್ಕೆಗಳಿದ್ದರೆ, (ಬಂಗು) ಎಕ್ಕದ ಬೇರನ್ನು ನಿಂಬೇರಸದಲ್ಲಿ ತೇದು ಅದಕ್ಕೆ ಸ್ವಲ್ಪ ಪುನುಗು ಸೇರಿಸಿ ಲೇಪಿಸಿ ಮೃದುವಾಗಿ ಹಚ್ಚಿಕೊಳ್ಳಬೇಕು. ಅಂಗಾಲಿನಲ್ಲಿ ಮುಳ್ಳು ಸೇರಿಕೊಂಡಿದ್ದರೆ, ಮುಳ್ಳನ್ನು ನಿಧಾನವಾಗಿ ತೆಗೆದು ನಂತರ ಎಕ್ಕದ ಹಾಲನ್ನು ಆ ಜಾಗಕ್ಕೆ ಹಾಕುವುದರಿಂದ ಮುಳ್ಳಿನ ವಿಷದ ಬಾಧೆ ನಿವಾರಣೆಯಾಗುತ್ತದೆ.
ಮೂಲವ್ಯಾಧಿಯಿಂದ ಬಳಲುವವರಿಗೆ ಎಕ್ಕದ ಹಾಲಿಗೆ ಅರಿಶಿನ ಬೆರೆಸಿ ಮೊಳಕೆಗಳಿಗೆ ಲೇಪಿಸುವುದರಿಂದ ಬೇಗ ಗುಣವಾಗುತ್ತದೆ. ಹಾಗು ಎಕ್ಕದ ಕಾಂಡವನ್ನು ಹಲ್ಲುಜ್ಜಲು ಬಳಸಹುದು. ಹಲ್ಲುನೋವಿಗೆ ಇದು ಬಹಳ ಒಳ್ಳೆಯದು. ಮೂತ್ರಕಟ್ಟಿದ್ದಲ್ಲಿ ಎಕ್ಕದ ಎಲೆಗಳನ್ನು ಒಣಗಿಸಿ ನಯವಾದ ಪುಡಿಮಾಡಿಟ್ಟುಕೊಂಡು ೧೦ ಗ್ರಾಂ ನಷ್ಟನ್ನು ಬಿಸಿನೀರಿನಲ್ಲಿ ಬೆರಸಿ ಕುಡಿಸುವುದರಿಂದ ಮೂತ್ರವಿಸರ್ಜನೆ ಸುಗಮವಾಗುತ್ತದೆ.
ಮೇಲಿಂದ-ಮೇಲೆ ‘ಅಜೀರ್ಣದ ತೊಂದರೆ ಕಾಡುತ್ತಿದ್ದರೆ, ಎಕ್ಕದ ಬೇರಿನ ಭಸ್ಮವನ್ನು ಪ್ರತಿದಿನ ಬೆಳಿಗ್ಯೆ ಮತ್ತು ರಾತ್ರಿ,ಜೇನುತುಪ್ಪದೊಂದಿಗೆ ಸೇವಿಸತಕ್ಕದ್ದು. ಗಾಯಗಳಿಗೆ ಮತ್ತು ವೃಣಗಳಿಗೆ ಒಣಗಿಸಿದ ಎಲೆಯನ್ನು ಪುಡಿಮಾಡಿಟ್ಟುಕೊಂಡು ಸಿಂಪಡಿಸಬೇಕು. ಮಹಿಳೆಯರಿಗೆ ಮುಟ್ಟಿನ ಪ್ರಕ್ರಿಯೆ ಅನಿಯಮಿತವಾಗಿದ್ದಲ್ಲಿ ಎಕ್ಕದ ಹೂವು, ಬೆಲ್ಲ ಸೇರಿಸಿ,ಅರೆದು ಗುಳಿಗೆಮಾಡಿಕೊಂಡು, ದಿನಕ್ಕೆ ೩-೪ ಮಾತ್ರೆಯಂತೆ ಸೇವಿಸುವುದು ಉತ್ತಮ.
ಬಿಳಿಸೆರಗಿನಿಂದ ಬಳಲುತ್ತಿರುವ ಮಹಿಳೆಯರು’,ಎಕ್ಕದ ಹೂವನ್ನು ಒಣಗಿಸಿ ಪುಡಿಮಾಡಿಟ್ಟುಕೊಂಡು ಒಂದು ಚಿಟಿಕೆ ಪುಡಿಯನ್ನು ಜೇನುತುಪ್ಪಕ್ಕೆ ಸೇರಿಸಿ ೧೫ ದಿನಗಳ ವರೆಗೆ ಸೇವಿಸತಕ್ಕದ್ದು. ಅಜೀರ್ಣವಿದ್ದರೆ, ಎಕ್ಕದ ೧೦ ಹೂಗಳಿಗೆ ಒಂದು ಚಿಟಿಕೆ ಉಪ್ಪು ಬೆರೆಸಿ ತಿನ್ನಬೇಕು. ಕ್ರಿಮಿಕೀಟಗಳು, ಕಜ್ಜಿ,ಊತ, ಉರಿ ಬಾಧಿಸುತ್ತಿದ್ದರೆ, ಎಕ್ಕದ ಹಾಲನ್ನು ಅದರಮೇಲೆ ಲೇಪಿಸಿದರೆ, ಉಪಶಮನ ದೊರೆಯುತ್ತದೆ.
ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.